Numbers 15:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
Kannada BSI Bible 2016
ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ
Kannada Bible (KNCL) BSI 2016
ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.