Numbers 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
Kannada BSI Bible 2016
ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್‌ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನೂ ಆದ ಕೋರಹನೂ - ಅವನಲ್ಲದೆ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರೂ ಪೆಲೆತನ ಮಗನಾದ ಓನನೂ
Kannada Bible (KNCL) BSI 2016
ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು