Numbers 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
Kannada BSI Bible 2016
ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಇಟ್ಟುಕೊಂಡದ್ದು ಅಲ್ಪಕಾರ್ಯವೆಂದು ನಿಮಗೆ ಕಾಣುತ್ತದೋ? ಯಾಜಕತ್ವವೂ ನಿಮಗೆ ಆಗಬೇಕೆಂದು ಕೋರುತ್ತೀರಾ?
Kannada Bible (KNCL) BSI 2016
ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?