Numbers 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವೂ ನಿಮ್ಮ ಹಿಂಬಾಲಕರೂ ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
Kannada BSI Bible 2016
ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.
Kannada Bible (KNCL) BSI 2016
ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.