Numbers 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.
Kannada Bible (KNCL) BSI 2016
ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.