Numbers 16:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
Kannada BSI Bible 2016
ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.
Kannada Bible (KNCL) BSI 2016
ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.