Numbers 16:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೆ ಪ್ರತ್ಯಕ್ಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
Kannada BSI Bible 2016
ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.
Kannada Bible (KNCL) BSI 2016
ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.