Numbers 16:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
Kannada BSI Bible 2016
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,
Kannada Bible (KNCL) BSI 2016
ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.