Numbers 16:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
Kannada BSI Bible 2016
ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.
Kannada Bible (KNCL) BSI 2016
ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.