Numbers 16:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
Kannada BSI Bible 2016
ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅವರೆಲ್ಲರೂ ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ಬೇರೆ ಹೋದರು. ದಾತಾನ್ ಅಬೀರಾಮರೂ ಅವರ ಹೆಂಡರೂ ಮಕ್ಕಳೂ ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಲುಗಳಲ್ಲಿ ನಿಂತು ಕೊಂಡರು.
Kannada Bible (KNCL) BSI 2016
ಆದಕಾರಣ ಅವರೆಲ್ಲ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ಬೇರೆಹೋದರು. ದಾತಾನ್, ಅಬೀರಾಮ ಮತ್ತು ಅವರ ಮಡದಿ ಮಕ್ಕಳು, ಬಂಧುಬಳಗದವರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.