Numbers 16:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.
Kannada BSI Bible 2016
ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವವಾದ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂವಿುಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವದರಿಂದ ಇವರೆಲ್ಲರೂ ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ ಇವರು ಯೆಹೋವನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು ಎಂದು ಹೇಳಿದನು.
Kannada Bible (KNCL) BSI 2016
ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.