Numbers 16:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.
Kannada BSI Bible 2016
ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು.
Kannada Bible (KNCL) BSI 2016
ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.