Numbers 16:37 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾಜಕನಾದ ಆರೋನನ ಮಗ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
Kannada BSI Bible 2016
ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.
Kannada Bible (KNCL) BSI 2016
“ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.