Numbers 16:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
Kannada BSI Bible 2016
ಆದರೆ ಮರುದಿನದಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.
Kannada Bible (KNCL) BSI 2016
ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.