Numbers 16:45 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
Kannada BSI Bible 2016
ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.