Numbers 16:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
Kannada BSI Bible 2016
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.
Kannada Bible (KNCL) BSI 2016
ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.