Numbers 16:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
Kannada BSI Bible 2016
ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
Kannada Bible (KNCL) BSI 2016
ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.