Numbers 16:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ಯೆಹೋವನವನೆಂದು ಯೆಹೋವನು ತೋರಿಸುವನು. ಯಾವನು ಪ್ರತಿಷ್ಠಿತನೆಂದು ಯೆಹೋವನು ತೋರಿಸುವನು ಮತ್ತು ಯೆಹೋವನು ಅವನನ್ನು ತನ್ನ ಹತ್ತಿರ ಕರೆದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
Kannada BSI Bible 2016
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
Kannada Bible (KNCL) BSI 2016
ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ: