Numbers 16:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಯಿಲೆಯು ನಿಂತುಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿದ್ದ ಮೋಶೆಯ ಬಳಿಗೆ ತಿರುಗಿ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
Kannada BSI Bible 2016
ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಪತ್ತು ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಲಿಗೆ ಮೋಶೆಯ ಬಳಿಗೆ ತಿರಿಗಿ ಬಂದನು.
Kannada Bible (KNCL) BSI 2016
ವಿಪತ್ತು ನಿಂತಮೇಲೆ ಆರೋನನು ದೇವದರ್ಶನದ ಗುಡಾರದ ಬಳಿಯಿದ್ದ ಮೋಶೆಯ ಬಳಿಗೆ ಹಿಂದಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.