Numbers 16:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೊ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
Kannada BSI Bible 2016
ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳುಕೊಳ್ಳುವಿರಿ. ಲೇವಿಯರೇ, ನಿವ್ಮಿುಂದ ಸಾಕಾಯಿತು ಎಂದು ಹೇಳಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.