Numbers 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.
Kannada BSI Bible 2016
ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.