Numbers 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
Kannada BSI Bible 2016
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಮೋಶೆಯ ಬಳಿಗೆ ಬಂದು ಅವನಿಗೆ - ನಾವು ಪ್ರಾಣಕಳಕೊಳ್ಳುವವರಾದೆವಲ್ಲಾ; ಇಲ್ಲದೆ ಹೋಗುತ್ತೇವೆ; ನಾವು ನಿಶ್ಶೇಷವಾಗಿ ಇಲ್ಲದೆ ಹೋಗುವ ಹಾಗೆ ಕಾಣುತ್ತದೆ;
Kannada Bible (KNCL) BSI 2016
ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.