Numbers 17:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
Kannada BSI Bible 2016
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.
Kannada Bible (KNCL) BSI 2016
“ಇಸ್ರಯೇಲರ ಸಂಗಡ ನೀನು ಮಾತಾಡಿ ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೋ. ಅವನವನ ಕೋಲಿನ ಮೇಲೆ ಆಯಾ ಅಧಿಪತಿಯ ಹೆಸರನ್ನು ಬರೆಯಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.