Numbers 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
Kannada BSI Bible 2016
ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲ್ಯರ ಸಂಗಡ ಮಾತಾಡಲಾಗಿ ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು; ಅವುಗಳೊಡನೆ ಆರೋನನ ಕೋಲೂ ಇತ್ತು.
Kannada Bible (KNCL) BSI 2016
ಅದರಂತೆಯೇ ಮೋಶೆ ಇಸ್ರಯೇಲರೊಡನೆ ಮಾತಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದರಂತೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲು ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.