Numbers 17:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು. ಆರೋನನು ಪ್ರಧಾನಯಾಜಕನಾಗಿದ್ದಾನೆಂದು ದೇವರು ಸಾಕ್ಷೀಕರಿಸಿದ್ದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
Kannada BSI Bible 2016
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
Kannada Bible (KNCL) BSI 2016
ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.