Numbers 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
Kannada BSI Bible 2016
ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು.
Kannada Bible (KNCL) BSI 2016
ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.