Numbers 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
Kannada BSI Bible 2016
ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲ್ಯರೆಲ್ಲರ ಬಳಿಗೆ ತಂದು ತೋರಿಸಿದನು; ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.
Kannada Bible (KNCL) BSI 2016
ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.