Numbers 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
Kannada BSI Bible 2016
ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು; ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
Kannada Bible (KNCL) BSI 2016
ಅವುಗಳಲ್ಲಿ ಅತಿ ಪವಿತ್ರವಾದುವುಗಳನ್ನು ನೀವೇ ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಅತಿ ಪವಿತ್ರವಾದುವು; ಎಂಬುದನ್ನು ತಿಳಿದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು.