Numbers 18:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
Kannada BSI Bible 2016
ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್‌ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
Kannada Bible (KNCL) BSI 2016
“ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.