Numbers 18:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
Kannada BSI Bible 2016
ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
Kannada Bible (KNCL) BSI 2016
“ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.