Numbers 18:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
Kannada BSI Bible 2016
ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
Kannada Bible (KNCL) BSI 2016
ಹಸುವಿನ ಮತ್ತು ಆಡುಕುರಿಗಳ ಚೊಚ್ಚಲು ಮರಿಗಳನ್ನು ಬಿಡಕೂಡದು. ಅವು ದೇವರ ಸೊತ್ತು. ಆದ್ದರಿಂದ ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸು; ಅವುಗಳ ಕೊಬ್ಬನ್ನು ಬಲಿಕಾಣಿಕೆಯಾಗಿ ದಹಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.