Numbers 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
Kannada BSI Bible 2016
ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
Kannada Bible (KNCL) BSI 2016
ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.