Numbers 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
Kannada BSI Bible 2016
ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.
Kannada Bible (KNCL) BSI 2016
“ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.