Numbers 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು.
Kannada Bible (KNCL) BSI 2016
ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.