Numbers 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
Kannada BSI Bible 2016
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.
Kannada Bible (KNCL) BSI 2016
ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.