Numbers 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.
Kannada Bible (KNCL) BSI 2016
ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.