Numbers 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
“ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.