Numbers 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
Kannada BSI Bible 2016
ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಕೊಡಲ್ಪಡುವ ಸಕಲಪದಾರ್ಥಗಳಲ್ಲಿಯೂ ನೀವು ಉತ್ತಮಭಾಗವನ್ನೇ ಅಂದರೆ ದೇವರ ವಸ್ತುವಾಗುವದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು.
Kannada Bible (KNCL) BSI 2016
ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’