Numbers 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
Kannada BSI Bible 2016
ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ನಿನ್ನ ಅಪ್ಪಣೆಯ ಮೇರೆಗೆ ನಡೆದು ಗುಡಾರವನ್ನೆಲ್ಲಾ ಕಾಯಬೇಕು; ಆದರೆ ಪವಿತ್ರಸ್ಥಾನದ ಸಾಮಾನಿನ ಹತ್ತಿರವಾಗಲಿ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವನು ಸಾಯುವದು ಮಾತ್ರವಲ್ಲದೆ ನೀವೂ ಸತ್ತೀರಿ.
Kannada Bible (KNCL) BSI 2016
ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.