Numbers 18:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.
Kannada BSI Bible 2016
ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ವಿುಕ್ಕದರ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವದಿಲ್ಲ. ಇಸ್ರಾಯೇಲ್ಯರು ಸಮರ್ಪಿಸುವ ದೇವರ ವಸ್ತುಗಳನ್ನು ಸಾಧಾರಣವೆಂದೆಣಿಸಿ ಸಾಯಬೇಡಿರಿ ಎಂಬದೇ.
Kannada Bible (KNCL) BSI 2016
ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.