Numbers 18:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮುಂದೆ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾಗದಂತೆ ನೀವೇ ದೇವಸ್ಥಾನದ ಸಾಮಾನನ್ನೂ ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
Kannada Bible (KNCL) BSI 2016
ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.