Numbers 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
Kannada BSI Bible 2016
ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ನಾನು ಇಸ್ರಾಯೇಲ್ಯರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ತೆಗೆದುಕೊಂಡಿದ್ದೇನೆ; ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ; ಅವರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು.
Kannada Bible (KNCL) BSI 2016
ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.