Numbers 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
Kannada BSI Bible 2016
ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
Kannada Bible (KNCL) BSI 2016
ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.