Numbers 19:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
Kannada BSI Bible 2016
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲ್ಯರಿಗೂ ಅವರಲ್ಲಿ ಇಳುಕೊಂಡಿರುವ ಇತರರಿಗೂ ಶಾಶ್ವತನಿಯಮ.
Kannada Bible (KNCL) BSI 2016
ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.