Numbers 19:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
Kannada BSI Bible 2016
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
Kannada Bible (KNCL) BSI 2016
ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.