Numbers 19:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
Kannada BSI Bible 2016
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು.
Kannada Bible (KNCL) BSI 2016
“ಅಂಥ ಮಡಿಗೆಟ್ಟವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿಟ್ಟು ಅದರ ಮೇಲೆ ಹರಿಯುವ ನೀರನ್ನು ಹುಯ್ಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು.