Numbers 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
Kannada BSI Bible 2016
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು.
Kannada Bible (KNCL) BSI 2016
ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.