Numbers 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Kannada BSI Bible 2016
ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದನಂತರ ಪಾಳೆಯದೊಳಗೆ ಬರಬಹುದು, ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Kannada Bible (KNCL) BSI 2016
ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.