Numbers 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ರೂಬೇನ್ ಕುಲದವರ ಪಕ್ಕದಲ್ಲಿ ಸಿಮೆಯೋನ್ ಕುಲದವರು ಪಾಳೆಯ ಹಾಕುವರು. ಸಿಮೆಯೋನ್ ಕುಲದವರ ನಾಯಕನು ಚೂರೀಷದ್ದೈನ ಮಗನಾದ ಶೆಲುಮೀಯೇಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
Kannada BSI Bible 2016
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಮೀಪದಲ್ಲಿ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ್ಯರ ನಾಯಕನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು;
Kannada Bible (KNCL) BSI 2016
ಅವರ ಸಮೀಪದಲ್ಲೇ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ್ ಕುಲದವರಿಗೆ ನಾಯಕ ಚೂರೀಷದ್ದೈಯನ ಮಗ ಶೆಲೂಮೀಯೇಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನನ ಗೋತ್ರದವರು. ಸಿಮೆಯೋನನ ಮಕ್ಕಳಿಗೆ ಚುರೀಷದ್ದೈಯನ ಮಗನಾದ ಶೆಲುಮೀಯೇಲನು ಸೈನ್ಯಾಧಿಪತಿ.