Numbers 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
Kannada BSI Bible 2016
ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸೈನ್ಯಗಳ ನಟ್ಟನಡುವೆಯಲ್ಲಿ ದೇವದರ್ಶನದ ಗುಡಾರವೂ ಲೇವಿಯರ ಪಾಳೆಯದವರೂ ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
Kannada Bible (KNCL) BSI 2016
“ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.